Join The Telegram | Join The WhatsApp |
ಬೆಳಗಾವಿ :
ಬೆಳಗಾವಿ ಕೆಎಲ್ ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ಸಂವಿಧಾನ ದಿನವನ್ನು ಆಚರಿಸಲಾಯಿತು. ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ್ ಅವರು ಭಾರತದ ಸಂವಿಧಾನ ರಚನೆ ಹಾಗೂ ಅದರ ವೈಶಿಷ್ಟ್ಯಗಳನ್ನು ವಿವರಿಸಿದರು.
ಭಾರತದ ಸಂವಿಧಾನ ಜಗತ್ತಿನಲ್ಲೇ ಅತ್ಯಂತ ದೊಡ್ಡ ಸಂವಿಧಾನ ಎಂಬ ಹಿರಿಮೆಗೆ ಪಾತ್ರವಾಗಿದೆ. ದೇಶ ಸ್ವಾತಂತ್ರ್ಯ ಗಳಿಸಿ 75 ವರ್ಷ ಕಳೆದರೂ ಸಂವಿಧಾನದ ಮೂಲ ಆಶಯಗಳಿಗೆ ತೊಂದರೆಯಾಗಿಲ್ಲ. ಅತ್ಯಂತ ಶ್ರೇಷ್ಠ ರೀತಿಯಲ್ಲಿ ನಮ್ಮ ದೇಶದ ಸಂವಿಧಾನ ರಚನೆಯಾಗಿದೆ ಎಂದು ಹೇಳಿದರು.ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Join The Telegram | Join The WhatsApp |