ಬೆಳಗಾವಿ : ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಸಂಜೆ ಐದು ಗಂಟೆಗೆ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಪ್ರಚಲಿತ ವಿದ್ಯಮಾನಗಳ ಕುರಿತು ಮಾತುಕತೆ ಮತ್ತು ಸಂವಾದ ಹಾಗೂ ಗುರುವಾರ ಬೆಳಗ್ಗೆ ಹನ್ನೊಂದು ಗಂಟೆಗೆ ಸಂವಿಧಾನ ಓದು ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ.
ಎರಡೂ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯಮೂರ್ತಿ ಎಚ್. ಎನ್. ನಾಗಮೋಹನ್ ದಾಸ್ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ. ತ್ಯಾಗರಾಜ ಅವರು ವಹಿಸಲಿದ್ದಾರೆ ಎಂದು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ ಎಂ ಜಿ ಹೆಗಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.