ದೆಹಲಿ :

2024ರ ಲೋಕಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.
7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಆಯುಕ್ತ ರಾಜೀವ್ ಕುಮಾ‌ರ್ ಪ್ರಕಟಿಸಿದ್ದಾರೆ. ಮೊದಲ ಹಂತದಲ್ಲಿ ಏಪ್ರಿಲ್ 19 ರಂದು ಮತ್ತು ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಮೂರನೇ ಹಂತದ ಮತದಾನ ಮೇ 7 ರಂದು, ನಾಲ್ಕನೇ ಹಂತ ಮೇ 13 ರಂದು ಮತ್ತು ಐದನೇ ಹಂತದ ಮತದಾನ ಮೇ 20 ರಂದು ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.