ಬೆಂಗಳೂರು : ರಾಜ್ಯದಲ್ಲಿ 201ರಲ್ಲಿ ನಡೆದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಆದರೆ, ಶುಕ್ರವಾರ ಶಿಕ್ಷೆ ಪ್ರಮಾಣವನ್ನೂ ಕಾಯ್ದಿರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಶಾಸಕ ಸತೀಶ್ ಸೈಲ್ ಅವರನ್ನು ವಶಕ್ಕೆ ಪಡೆಯುವಂತೆ ಕೋರ್ಟ್‌ನಿಂದ ಸೂಚನೆ ನೀಡಲಾಗಿದೆ.

ಬೆಲೇಕೆರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳಲ್ಲಿ ಇಂದು ಅಂತಿಮ ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದ ತನಿಖಾ ಸಂಸ್ಥೆ ಸಿಬಿಐನಿಂದ ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು. ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದ ಆಲಿಸಿ ಅಂತಿಮ ಆದೇಶವನ್ನು ಹೊರಡಿಸಿದ್ದಾರೆ. ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಳ್ ಬಿಲಿಯಾ ಸೇರಿ ಹಲವರ ವಿರುದ್ಧದ ಕೇಸ್ ಇದೆ. ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್ ಬಿಳೆಯಿ, ಶಾಸಕ ಸತೀಶ್ ಸೇರಿ ಎಲ್ಲಾ ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ.

ಇನ್ನು ಬೆಲೇಕೆರಿ ಅದಿರು ನಾಪತ್ತೆ ಕೇಸಿನಲ್ಲಿ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಆದೇಶ ನೀಡಿದ ಬೆನ್ನಲ್ಲಿಯೇ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟ ಮಾಡಲಿದೆ. ಇದರಿಂದ ಶಾಸಕ ಸತೀಶ್ ಸೈಲ್ ಅವರನ್ನು ಇಂದು ವಶಕ್ಕೆ ಪಡೆಯುವಂತೆ ಕೋರ್ಟ್‌ನಿಂದ ಆದೇಶ ಹೊರಡಿಸಲಾಗಿದೆ. ಇನ್ನು ಎಲ್ಲ ಅಪರಾಧಿಗಳಿಗೂ ನಾಳೆ ಶಿಕ್ಷೆ ಪ್ರಮಾಣ ಪ್ರಕಟ ಆಗಲಿದ್ದು, ನಾಳೆಯೇ ಜೈಲಿಗೆ ಕಳುಹಿಸುವ ಸಾಧ್ಯತೆಯಿದೆ. ಆದರೆ, ಶಿಕ್ಷೆಯ ಪ್ರಮಾಣ ಎಷ್ಟು? ಯಾವ ಮಾನದಂಡದ ಮೇಲೆ ಶಿಕ್ಷೆ ನೀಡಲಾಗಿದೆ ಎಂಬುದು ಶುಕ್ರವಾರ ಸಂಜೆ ವೇಳೆಗೆ ಕೋರ್ಟ್ ಆದೇಶದ ನಂತರ ತಿಳಿಯಲಿದೆ.