This is the title of the web page
This is the title of the web page

Live Stream

June 2023
S M T W T F S
 123
45678910
11121314151617
18192021222324
252627282930  

| Latest Version 9.4.1 |

State News

7ನೇ ವೇತನ ಆಯೋಗ ಸಂಬಂಧಿಸಿದಂತೆ ಹುದ್ದೆಗಳ ಸೃಷ್ಟಿ

Join The Telegram Join The WhatsApp

ಬೆಂಗಳೂರು-

ಕರ್ನಾಟಕ ಸರ್ಕಾರ ಈಗಾಗಲೇ 7ನೇ ವೇತನ ಆಯೋಗ ರಚನೆ ಮಾಡಿ ಆದೇಶ ಹೊರಡಿಸಿದೆ. ಸುಧಾಕರ್ ರಾವ್ ಅಧ್ಯಕ್ಷರಾಗಿರುವ ಆಯೋಗಕ್ಕೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿದೆ.

ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆ (ಸೇವೆಗಳು-2) ಸರ್ಕಾರದ ಉಪ ಕಾರ್ಯದರ್ಶಿ ಉಮಾ ಕೆ. ಶುಕ್ರವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. 19/11/2022ರ ಸರ್ಕಾರಿ ಆದೇಶದಲ್ಲಿ ರಚಿಸಲಾದ 7ನೇ ರಾಜ್ಯ ವೇತನ ಆಯೋಗದ ಕಾರ್ಯ ನಿರ್ವಹಣೆಗಾಗಿ ಪೂರಕವಾಗಿ ಹೊಸ ಹುದ್ದೆಗಳನ್ನುಸೃಜಿಸುವ ಪ್ರಸ್ತಾವನೆಯನ್ನು ಸರ್ಕಾರ ಪರಿಶೀಲಿಸಿ ಈ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ಹುದ್ದೆಗಳ ವಿವರಗಳು; ಕಾರ್ಯದರ್ಶಿ (ಐಎಎಸ್ ವೃಂದ) 1, ಅಪರ/ ಜಂಟಿ/ ಉಪ ಕಾರ್ಯದರ್ಶಿ/ ವಿಶೇಷಾಧಿಕಾರಿ 3, ಜಂಟಿ/ ಉಪ/ ಸಹಾಯಕ ನಿರ್ದೇಶಕರು (ಅಂಕಿ-ಅಂಶ) 1, ಅಧೀನ ಕಾರ್ಯದರ್ಶಿ/ ಆಪ್ತ ಕಾರ್ಯದರ್ಶಿ 6, ಶಾಖಾಧಿಕಾರಿ 2, ಹಿರಿಯ ಸಹಾಯಕರು/ ಸಹಾಯಕರು/ ಶೀಘ್ರಪಿಲಿಗಾರರು/ ಕಿರಿಯ ಸಹಾಯಕರು/ ಬೆರಳಚ್ಚುಗಾರರು/ ಡಾಟಾ ಎಂಟ್ರಿ ಆಪರೇಟರ್ ಹಾಗೂ ಇತರೆ ಗ್ರೂಪ್ ಸಿ ವೃಂದದ ಹುದ್ದೆಗಳು 25, ದಲಾಯತ್ 6 ಹುದ್ದೆ ಭರ್ತಿ ಮಾಡಲು ಒಪ್ಪಿಗೆ ನೀಡಲಾಗಿದೆ.


Join The Telegram Join The WhatsApp
Admin
the authorAdmin

Leave a Reply