Join The Telegram | Join The WhatsApp |
ಹಾಸನ :
ಶ್ರೀಕ್ಷೇತ್ರ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಭಟ್ಟಾಚಾರ್ಯ ಸ್ವಾಮೀಜಿ ಚಿತೆಗೆ ಅಗ್ನಿಸ್ಪರ್ಶ ಮಾಡಲಾಯಿತು.
ಚಂದ್ರಗಿರಿ ಬೆಟ್ಟದ ತಪ್ಪಲಿನಲ್ಲಿ ಜೈನ ಸಂಪ್ರದಾಯದಂತೆ ಸೂರ್ಯಾಸ್ತಕ್ಕೂ ಮೊದಲು ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರದ ವಿಧಿವಿಧಾನದ ನೆರವೇರಿಸಲಾಯಿತು.
ಜೈನ ಮಠದ ಭಟ್ಟಾರಕರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (74) ಗುರುವಾರ ವಿಧಿವಶರಾಗಿದ್ದರು.
ಅಗ್ನಿ ಸ್ಪರ್ಶಕ್ಕೂ ಮುನ್ನ ಶ್ರೀಗಳನ್ನು ಕೂರಿಸಿ ಪೂಜೆ ಸಲ್ಲಿಸಲಾಯಿತು. ಸಾಂಕೇತಿಕವಾಗಿ ಶ್ರೀಗಳ ಪಾರ್ಥಿವ ಶರೀರಕ್ಕೆ ಅಭಿಷೇಕ ಮಾಡಲಾಯಿತು. ಪೂಜಾ ಕೈಂಕರ್ಯದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು. ಐತಿಹಾಸಿಕ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು (ಮಾ.23) ಮುಂಜಾನೆ ಕೊನೆಯುಸಿರೆಳೆದಿದ್ದರು.
ಬೆಳಿಗ್ಗೆ ನಿತ್ಯಕರ್ಮಕ್ಕೆ ಎದ್ದಾಗ ಕಾಲುಜಾರಿ ಬಿದ್ದು ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದರಿಂದ ಶ್ರೀಗಳು ಮೃತಪಟ್ಟಿದ್ದಾರೆ ಎಂದು ಹಾಸನ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಹೇಳಿದ್ದಾರೆ. ಸ್ವಾಮೀಜಿಯವರು ಹಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು. ಈ ಕಾರಣದಿಂದ ಶ್ರೀಗಳು ನಿಯಂತ್ರಣ ತಪ್ಪಿ ಮುಂಜಾನೆ ಬಿದ್ದಿದ್ದಾರೆ. ತೀವ್ರ ಗಾಯದಿಂದ ಬಳಲಿದ್ದ ಶ್ರೀಗಳನ್ನ ಸಿಬ್ಬಂದಿಯವರು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ತಲೆಗೆ ಗಂಭೀರ ಗಾಯವಾದ್ದರಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
Join The Telegram | Join The WhatsApp |