ಉಡುಪಿ : ಪೆರ್ಡೂರು ಪುರಾಣ ಪ್ರಸಿದ್ಧ ಶ್ರೀ ಅನಂತ ಪದ್ಮನಾಭ ದೇವಾಲಯದ ಎದುರಿನ ನಗಾರಿ ಗೋಪುರ ಬಿರುಕುಗೊಂಡಿದ್ದು ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಈ ಕೂಡಲೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಗಾರಿ ಗೋಪುರ ಸಂಪೂರ್ಣ ಶಿಥಿಲಗೊಂಡಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಕಟ್ಟಡ ಸುಸ್ಥಿತಿಯಲ್ಲಿ ಇರದ ಕಾರಣ ವಾಸಕ್ಕೆ ಯೋಗ್ಯವಾಗಿಲ್ಲ ಎಂಬ ವರದಿ ನೀಡಿದ್ದಾರೆ. ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿ ಪ್ರವೇಶ ದ್ವಾರ ಕಟ್ಟಡ ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣದ ಯೋಜನೆ ಕುರಿತು ಅನುಮತಿ ನೀಡಿದ್ದಾರೆ.

ನಗಾರಿ ಗೋಪುರ ದುರಸ್ತಿಗೆ ಸರಕಾರ ಅನುಮತಿಸಿದೆ. ಈ ಬಗ್ಗೆ ಮೇ 25 ರಂದು ಬೆಳಗ್ಗೆ 10 ಗಂಟೆಗೆ ಸಮಾಲೋಚನೆ ಸಭೆ ನಡೆಯಲಿದೆ ಎಂದು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಮೋದ್ ರೈ ತಿಳಿಸಿದ್ದಾರೆ.