ಬೆಂಗಳೂರು :
“ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರ ಒಗ್ಗಟ್ಟಿನ ಪ್ರದರ್ಶನದಿಂದ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಸಿಎಂ ಹಾಗೂ ಎಲ್ಲಾ ಶಾಸಕರಿಗೆ ಅಭಿನಂದನೆಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾದ ನಂತರ ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು ಹೀಗೆ;
“ಕಾಂಗ್ರೆಸ್ ಅಭ್ಯರ್ಥಿಗಳಾದ ಜಿ.ಸಿ ಚಂದ್ರಶೇಖರ್ (45 ಮತಗಳು), ನಾಸಿರ್ ಹುಸೇನ್ (47 ಮತಗಳು), ಅಜಯ್ ಮಕೇನ್ (47 ಮತಗಳು) ಅವರು ಮೊದಲ ಸುತ್ತಿನಲ್ಲೇ ಗೆಲುವು ಸಾಧಿಸಿದ್ದಾರೆ.
ಇದು ಕಾಂಗ್ರೆಸ್ ಪಕ್ಷದ ಐಕ್ಯತೆ ಹಾಗೂ ಒಗ್ಗಟ್ಟಿನ ಫಲಿತಾಂಶ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸರ್ಜೇವಾಲ, ವೇಣುಗೋಪಾಲ್ ಅವರು ನಮ್ಮ ಜತೆ ಚರ್ಚೆ ಮಾಡಿ ಮಾರ್ಗದರ್ಶನ ನೀಡುತ್ತಿದ್ದರು. ಅವರನ್ನೂ ಅಭಿನಂದಿಸುತ್ತೇನೆ. ಈ ಸಮಯದಲ್ಲಿ ನಾನು ಬೇರೆ ಪಕ್ಷಗಳ ಬಗ್ಗೆ ಮಾತನಾಡುವುದಿಲ್ಲ.”