ಬೆಂಗಳೂರು : ಲೋಕಸಭಾ ಚುನಾವಣೆ ಏನೋ ಮುಗಿದಿದೆ. ಫಲಿತಾಂಶ ಹೊರಬೀಳಬೇಕಿದೆ. ಈ ಹೊತ್ತಿನಲ್ಲೇ ರಾಜಕೀಯ ನಾಯಕರಿಗೆ ಮತ್ತೊಂದು ಅಗ್ನಿಪರೀಕ್ಷೆ ಎದುರಾಗಿದೆ. ವಿಧಾನಪರಿಷತ್‌ ಚುನಾವಣಾ ಕಾವು ರಂಗೇರಿದೆ. ಈ ಮಧ್ಯೆ ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಪದವೀಧರ ಮತದಾರರು ಮತ್ತು ಶಿಕ್ಷಕರಿಗೆ ವಿಶೇಷ ರಜೆ ನೀಡಿ ರಾಜ್ಯ ಸರ್ಕಾರದಿಂದ ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ.