ದೆಹಲಿ :
ದೆಹಲಿ ಲಿಕ್ಕ‌ರ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಸಿಎಂ ಅರವಿಂದ ಕೇಜ್ರಿವಾಲ್‌ರನ್ನು ಬಂಧಿಸುವ ಸಾಧ್ಯತೆ ಇದೆ.

ಲಿಕ್ಕ‌ರ್ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್‌ಗೆ ಇಡಿ ಅಧಿಕಾರಿಗಳು ಸತತ ಮೂರು ಬಾರಿ ಸಮನ್ಸ್ ನೀಡಿದ್ದಾರೆ. ಆದರೆ ಕೇಜ್ರಿವಾಲ್‌ ವಿಚಾರಣೆಗೆ ಹಾಜರಾಗಿಲ್ಲ. ಈ ಕಾರಣದಿಂದಾಗಿ ಕೇಜ್ರಿವಾಲ್‌ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಬಗ್ಗೆ ಸಚಿವೆ ಅತಿಶಿ ಟ್ವಿಟ್ ಮಾಡಿ ಕೇಜ್ರಿವಾಲ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ಮತ್ತೆ ದಾಳಿ ನಡೆಸಿ, ಅರೆಸ್ಟ್ ಮಾಡುವ ಸಾಧ್ಯತೆ ಇದೆ ಎಂದು ಟ್ವಿಟ್ ಮಾಡಿದ್ದಾರೆ.