ದೆಹಲಿ : ಭಾನುವಾರ ಬೆಳಗ್ಗೆ ದೆಹಲಿಯ ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದ ಸಿಆರ್ಪಿಎಫ್ ಶಾಲೆಯ ಹೊರಗೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ವ್ಯಕ್ತಿಗಳಿಗೆ ಗಾಯಗಳು ಅಥವಾ ಸಾವು ನೋವುಗಳು ವರದಿಯಾಗಿಲ್ಲ. ಎರಡು ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಪೊಲೀಸರು ಸ್ಥಳವನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಪ್ರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.