ಬೆಂಗಳೂರು: ಮುಡಾ ಹಗರಣದಲ್ಲಿ ನ್ಯಾಯಾಲಯದ ವ್ಯತಿರಿಕ್ತ ತೀರ್ಪಿನ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೇರಳಕ್ಕೆ ತೆರಳುತ್ತಿರುವುದು ಗಮನ ಸೆಳೆದಿದೆ.

ಆರ್ಯದನ್ ಮೊಹಮ್ಮದ್ ಸಂಸ್ಮರಣಾ ಸಮಿತಿ ಕೇರಳದ ನೀಲಂಬೂರು ನಗರದಲ್ಲಿ ಇಂದು ಅಯೋಜಿಸಿರುವ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ.

ಇಂದು ಮಧ್ಯಾಹ್ನ ಮೂರು ಗಂಟೆಗೆ ಕೇರಳಕ್ಕೆ ಪ್ರಯಾಣ ಬೆಳಸಲಿರುವ ಮುಖ್ಯಮಂತ್ರಿಗಳು ಸಂಜೆ 5 ಗಂಟೆಗೆ ನಡೆಯುವ ಸಮಾರಂಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಬಳಿಕ ಮುಖ್ಯಮಂತ್ರಿಗಳು ವಿಚಾರ ಸಂಕಿರಣದಲ್ಲಿ ಪ್ರಧಾನ ಭಾಷಣ ಮಾಡಿ ರಾತ್ರಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.