ಮುಂಬೈ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ದೇವೇಂದ್ರ ಫಡ್ನವಿಸ್ ಇದೀಗ ಸಜ್ಜಾಗಿದ್ದಾರೆ. ಈ ಮೊದಲು ಡಿಸೆಂಬರ್ ಎರಡರಂದು ದೇವೇಂದ್ರ ಫಡ್ನವಿಸ್ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಬಗ್ಗೆ ತೀರ್ಮಾನವಾಗಿತ್ತು. ಆದರೆ ಇದೀಗ ಡಿಸೆಂಬರ್ ಐದರ ಗುರುವಾರದಂದು ದೇವೇಂದ್ರ ಫಡ್ನವಿಸ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಹಂಗಾಮಿ ಮುಖ್ಯಮಂತ್ರಿ ಆಗಿರುವ ಏಕನಾಥ ಶಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ದೆಹಲಿಯಲ್ಲಿ ನಡೆಯಬೇಕಾಗಿದ್ದ ಸಭೆ ರದ್ದುಗೊಂಡಿದೆ. ನೂತನ ಸಚಿವ ಸಂಪುಟದಲ್ಲಿ ಏಕನಾಥ ಶಿಂದೆ ಮತ್ತು ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನವ ಸ್ವೀಕರಿಸುವ ಸಾಧ್ಯತೆ ಇದೆ.