Join The Telegram | Join The WhatsApp |
ಮಂಗಳೂರು :
ತುಳುನಾಡು ಹೊರತುಪಡಿಸಿದ ದೈವಾರಾಧನೆ ವಿರುದ್ಧ ಭಕ್ತರು ಇದೀಗ ಕೊರಗಜ್ಜನ ಮೊರೆ ಹೋಗಿದ್ದಾರೆ.
ಮಂಗಳೂರು ಸಮೀಪದ ಕುತ್ತಾರು ಬಳಿಯ ಕೊರಗಜ್ಜನ ಆದಿ ಕ್ಷೇತ್ರದಲ್ಲಿ ಸಂಘಟನೆಗಳ ನೇತೃತ್ವದಲ್ಲಿ ಈ ಬಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ. ತುಳುನಾಡು ದೈವಾರಾಧನಾ ಸಂರಕ್ಷಣಾ ಯುವ ವೇದಿಕೆ, ಹಿಂದೂ ಸಂರಕ್ಷಣಾ ಸಮಿತಿ ಮಂಗಳೂರು ಹಾಗೂ ದೈವಾರಾಧನಾ ಸಮಿತಿ ಬೆಳ್ತಂಗಡಿ ವತಿಯಿಂದ ಕುತ್ತಾರು ಕೊರಗಜ್ಜನ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ.
ಮೈಸೂರು, ಬೆಂಗಳೂರು ಭಾಗದಲ್ಲಿ ಕೊರಗಜ್ಜ ದೈವದ ಕೋಲ ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇದೀಗ ಪ್ರಾರ್ಥನೆ ಸಲ್ಲಿಸಲಾಗಿದೆ.
ಕೊರಗಜ್ಜನ ಹೆಸರಿನಲ್ಲಿ ಹಣ ವಸೂಲಿ ಮಾಡುವವರ ವಿರುದ್ಧ ಕಾನೂನು ಹೋರಾಟಕ್ಕೂ ಸಹಾ ನಿರ್ಧಾರ ಕೈಗೊಳ್ಳಲಾಗಿದೆ .
Join The Telegram | Join The WhatsApp |