Join The Telegram | Join The WhatsApp |
ಮಂಗಳೂರು :
ಮಂಗಳೂರಿನ ನಾಗುರಿ ಬಳಿ ಶನಿವಾರ ಸಂಜೆ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ತಿರುವು ಪಡೆದುಕೊಂಡಿದ್ದು, ಇದೊಂದು ಭಯೋತ್ಪಾದನೆಯ ಕೃತ್ಯವಾಗಿದೆ ಎಂದು ಡಿಜಿಪಿ ಪ್ರವೀಣ ಸೂದ್ ಭಾನುವಾರ ಟ್ವೀಟ್ ಮಾಡಿದ್ದಾರೆ.
ದಾಳಿಯ ಸಂಚು ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಾಗಿ ಸಂಭವಿಸಿದ್ದಲ್ಲ. ಗಂಭೀರ ಹಾನಿಯನ್ನು ಉಂಟುಮಾಡುವ ಉದ್ದೇಶದಿಂದ ನಡೆದ ಭಯೋತ್ಪಾದನೆಯ ಕೃತ್ಯವಾಗಿದೆ. ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಇದರ ಬಗ್ಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ” ಎಂದು ಡಿಜಿಪಿ ಸೂದ್ ಅವರು ಭಾನುವಾರ ಮಾಡಿದ ಟ್ವಿಟರ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಅನುಮಾನಾಸ್ಪದ ವಸ್ತುಗಳು ಪತ್ತೆ…
ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ವೇಳೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಎಲ್ಲ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಆಟೋದಲ್ಲಿ ಎರಡು ಬ್ಯಾಟರಿ, ನಟ್, ಬೋಲ್ಟ್, ಸರ್ಕ್ಯೂಟ್ ರೀತಿಯ ವೈರಿಂಗ್ ಇರುವ ವಸ್ತು ಪತ್ತೆಯಾಗಿದೆ. ಲಘು ತೀವ್ರತೆ ಇರುವ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ, ಬಾಂಬ್ ನಿಷ್ಕ್ರೀಯ ದಳದಿಂದ ತೀವ್ರ ಪರಿಶೀಲನೆ ನಡೆಯುತ್ತಿದೆ.
ಸ್ಪೋಟದ ತೀವ್ರತೆಗೆ ಪ್ರಯಾಣಿಕನ ದೇಹದ ಅರ್ಧದಷ್ಟು ಭಾಗ ಸುಟ್ಟು ಹೋಗಿದ್ದು ಚಿಕಿತ್ಸೆ ಮುಂದುವರಿದಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವವನ್ನು ನಾಗುರಿ ಬಳಿ ಪ್ರಯಾಣಿಕ ಹತ್ತಿದ್ದ. ಆಟೋ ಒಂದು ಕಿ.ಮೀ ಕ್ರಮಿಸುವಷ್ಟರಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಪ್ರಯಾಣಿಕ ಕುಕ್ಕರ್ ಒಯ್ಯುತ್ತಿದ್ದಾಗ ಅದು ಸ್ಫೋಟಗೊಂಡಿತ್ತು .
Join The Telegram | Join The WhatsApp |