ಧರ್ಮಸ್ಥಳ :
ನಾಡಿನ ಹೆಸರಾಂತ ಪಾವನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀ ಮಂಜುನಾಥ ಸ್ವಾಮಿಯ ದಿವ್ಯ ಸಾನ್ನಿಧ್ಯದಲ್ಲಿ ಲಕ್ಷ ಲಕ್ಷ ಸಂಖ್ಯೆಯಲ್ಲಿ ದೀಪಗಳು ಬೆಳಗಲಿವೆ. ಐದು ದಿನಗಳ ಕಾಲ ನಡೆಯುವ ಸಂಭ್ರಮದಲ್ಲಿ ರಾಜ್ಯದೆಲ್ಲೆಡೆಯಿಂದ ಬರುವ ಸುಮಾರು 2 ಲಕ್ಷಕ್ಕೂ ಮಿಕ್ಕಿ ಭಕ್ತರು ಶ್ರೀ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.

ಶುಕ್ರವಾರ ಬೆಳಗ್ಗೆ 10.30ಕ್ಕೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ గిರೀಶ ನಂದನ್ ಪ್ರೌಢಶಾಲಾ ಆವರಣದಲ್ಲಿ ರಾಜ್ಯ ಮಟ್ಟದ ವಸ್ತುಪ್ರದರ್ಶನ ಉದ್ಘಾಟಿಸುವ ಮೂಲಕ ಲಕ್ಷ ದೀಪೋತ್ಸವ ಆಚರಣೆಗೆ ಚಾಲನೆ ನೀಡಲಾಗುತ್ತದೆ. ಪ್ರತಿದಿನ ವಿವಿಧ ಬಗೆಯ ಸಾಹಿತ್ಯ, ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳೂ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ. ಕ್ಷೇತ್ರದ 5 ವಿವಿಧ ಕಟ್ಟೆಗಳಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಉತ್ಸವಗಳು ನಡೆಯಲಿವೆ.

ಡಿ.8 ರಿಂದ ಆರಂಭವಾಗುವ ದೀಪೋತ್ಸವದ ಸಂಭ್ರಮ ಡಿ.11 ರಂದು ಸರ್ವಧರ್ಮ ಹಾಗೂ ಡಿ.12 ರಂದು ನಡೆಯುವ ಸಾಹಿತ್ಯ ಸಮ್ಮೇಳನದ ಮೂಲಕ ಸಮಾಪ್ತಿಗೊಳ್ಳಲಿದೆ.