Join The Telegram | Join The WhatsApp |
ಬೆಂಗಳೂರು :
ಧರ್ಮಸ್ಥಳದಲ್ಲಿ ಉದ್ದೇಶಿತ ವಿಮಾನ ನಿಲ್ದಾಣ ಪ್ರಕ್ರಿಯೆ ಮತ್ತಷ್ಟು ಚುರುಕುಗೊಂಡಿದೆ.
ಈ ಬಗ್ಗೆ ಮೂಲ ಸೌಕರ್ಯ ಹಾಗೂ ವಸತಿ ಖಾತೆ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ 200 ಎಕರೆ ಜಮೀನು ಅಗತ್ಯವಿದೆ. ಇದುವರೆಗೆ 170 ಎಕರೆ ಲಭ್ಯವಾಗಿದೆ. ಇನ್ನೂ 30 ಎಕರೆ ಜಮೀನು ಗುರುತಿಸಲು ಸೂಚನೆ ನೀಡಲಾಗಿದೆ ಎಂದರು.
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಅಂತಿಮ ಹಂತದಲ್ಲಿದೆ. ಫೆಬ್ರವರಿಗೆ ಉದ್ಘಾಟನೆ ಮಾಡಲಾಗುವುದು. ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಗೆ ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದರು.
Join The Telegram | Join The WhatsApp |