ಬೆಳಗಾವಿ :
ಭಾರತೀಯ ಜೈನ ಸಂಘಟನಾ ಬೆಳಗಾವಿ ಹಾಗೂ ಭರತೇಶ ಶಿಕ್ಷಣ ಸಂಸ್ಥೆಯ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ 3 ರಂದು ಬೆಳಗಾವಿಯ ಮಿಲೇನಿಯಂ ಗಾರ್ಡನ್ ನಲ್ಲಿ ದಿಗಂಬರ ಜೈನ ವಧು-ವರ ಪರಿಚಯ ಸಮಾವೇಶ ನಡೆಯಲಿದೆ.

ಈ ಸಮಾವೇಶದಲ್ಲಿ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಲ್ಲಿನ ದಿಗಂಬರ ಜೈನ ವಧು-ವರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಭಾಗವಹಿಸಲು ಹೆಸರು ನೊಂದಾಯಿಸಬೇಕಾಗುತ್ತದೆ. ಹೆಸರು ನೊಂದಣಿಯ ಕೊನೆಯ ದಿನಾಂಕ ನ.28 ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ಅನುರಾಧಾ ತಿಗಡಿ ಮೊ:7090942984 ಇಲ್ಲಿ ಸಂಪರ್ಕಿಸುವಂತೆ ಭಾರತೀಯ ಜೈನ ಸಂಘಟನೆಯ ರಾಜ್ಯ ಕಾರ್ಯದರ್ಶಿ ಶ್ರೀಪಾಲ ಖೇಮಲಾಪುರೆ, ಬೆಳಗಾವಿ ವಿಭಾಗದ ಅಧ್ಯಕ್ಷ ಅರುಣ ಯಲಗುದ್ರಿ, ಕಾರ್ಯದರ್ಶಿ ಹೀರಾಚಂದ ಕಲಮನಿ ಪ್ರಕಟಣೆಯಲ್ಲಿ ಕೋರಿದ್ದಾರೆ.