ಬೆಂಗಳೂರು : ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕೆಂಬ ಮನವಿಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದ ಜನಪ್ರತಿನಿಧಿಗಳ ನಿಯೋಗವು ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ಮಂಗಳವಾರ ಸಲ್ಲಿಸಿತು. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಇಕ್ಬಾಲ್ ಹುಸೈನ್, ಮಾಜಿ ಸಂಸದ ಡಿ ಕೆ ಸುರೇಶ್, ಎಂಎಲ್ಸಿಗಳಾದ ಪುಟ್ಟಣ್ಣ, ಎಸ್ ರವಿ, ಸುಧಾಮದಾಸ್, ಬೆಂಗಳೂರು ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಶಾಸಕರಾದ ಸಿ ಎಂ ಲಿಂಗಪ್ಪ, ರಾಜು, ಅಶ್ವಥ್ ಮತ್ತಿತರರು ಉಪಸ್ಥಿತರಿದ್ದರು.