ಬೆಂಗಳೂರು : ನೀಟ್‌ನಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿರುವುದರಿಂದ ಕರ್ನಾಟವೂ ತಮಿಳುನಾಡು ಮಾದರಿಯನ್ನು ಅನುಸರಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಹೇಳಿದರು.

ಈ ಪರೀಕ್ಷೆಯಿಂದ ನಮ್ಮ ರಾಜ್ಯದ ಮಕ್ಕಳಿಗೆ ದೊಡ್ಡ ಅನ್ಯಾಯವಾಗುತ್ತಿವೆ. ನಾವು ಕಾಲೇಜುಗಳನ್ನು ಕಟ್ಟಿದ್ದೇವೆ. ನೀಟ್ ಪರೀಕ್ಷೆಯಿಂದ ಉತ್ತರ ಭಾರತದ ರಾಜ್ಯಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಹೀಗಾಗಿ ನಮ್ಮ ಮಕ್ಕಳಿಗೆ ತಾರತಮ್ಯವಾಗುತ್ತಿದೆ. ನಮ್ಮ ಮಕ್ಕಳಿಗೆ ನ್ಯಾಯ ಒದಗಿಸಲು ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಅವಕಾಶ ಮಾಡಿಕೊಡುವುದು ಉತ್ತಮ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಸ್ಥಳೀಯ ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶಗಳು ದೊರೆಯಬೇಕು ಎನ್ನುವ ದೃಷ್ಟಿಯಿಂದ ತಮಿಳುನಾಡು ಸರ್ಕಾರ ನೀಟ್ ರದ್ದತಿಗೆ ನಿರ್ಣಯ ಕೈಗೊಂಡಿದೆ. ಇದೇ ಹಾದಿಯನ್ನು ಕರ್ನಾಟಕವೂ ಅನುಸರಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಹೇಳಿದರು.