ಬೆಂಗಳೂರು: ಮನೆ ಬದಲಾಯಿಸಿದ ನಂತರ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ಜನರಿಗೆ ಲಭ್ಯವಾಗಲಿದೆ.

ಗೃಹ ಜ್ಯೋತಿಗೆ ಒಂದು ವರ್ಷ ಆಗಿರುವ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಮಾಡಿ, ಮತ್ತೊಂದು ಮನೆಯ ಆ‌ರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ.

ಡಿ-ಲಿಂಕ್ ಮಾಡುವುದು ಹೇಗೆ?
ಗ್ರಾಹಕರ https://sevasindhu. karnataka.gov.in/ Gruha Jyothi Delink/ GetAadhaarData.aspx ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ. ಮನೆ ಬದಲಿಸುವ ಸಂದರ್ಭಲ್ಲಿ ಆಧಾ‌ರ್ ನಂಬರ್ ಜತೆ ಲಿಂಕ್ ಆಗಿರುವ ಆರ್.ಆರ್. ನಂಬರ್ ವಿವರ ಪರಿಶೀಲಿಸಿ ಡಿ-ಲಿಂಕ್ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್ ಜತೆ ಲಿಂಕ್ ಆಗಿರದ ನಂಬರ್‌ಗೆ ಹೀಗೆ ಮಾಡಬಹುದು. ಅಂದರೆ, ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್ ಮಾಡಿರುವುದನ್ನು ಖಾತ್ರಿ ಪಡಿಸಿಕೊಳ್ಳಿ.