This is the title of the web page
This is the title of the web page

Live Stream

June 2023
S M T W T F S
 123
45678910
11121314151617
18192021222324
252627282930  

| Latest Version 9.4.1 |

State News

ಅಧಿವೇಶನ ಈ ಸಲದ ವೈಶಿಷ್ಟ್ಯ ಏನು ಗೊತ್ತೇ ?

Join The Telegram Join The WhatsApp

ಬೆಳಗಾವಿ :

ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನ ಮಂಡಲದ ವಿಶೇಷ ಅಧಿವೇಶನದ ಸಿದ್ಧತೆಗಳು ಭರದಿಂದ ಸಾಗಿವೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಮವಾರ ಸಿದ್ಧತೆಗಳನ್ನು ವೀಕ್ಷಿಸಿ ಪತ್ರಕರ್ತರಿಗೆ ಮಾಹಿತಿ ನೀಡಿದರು.

* ಡಿಸೆಂಬರ್ 19 ರಿಂದ 30 ರವರೆಗೆ 15ನೇ ವಿಧಾನಸಭೆಯ 14 ನೇ ಅಧಿವೇಶನ ನಡೆಯಲಿದೆ.

* ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಪೂರ್ವಸಿದ್ಧತೆಗಳು ಈಗಾಗಲೇ ಮಾಡಿಕೊಳ್ಳಲಾಗುತ್ತಿದೆ.

* ಯಾವುದೇ ರೀತಿಯ ಲೋಪದೋಷಗಳಿಲ್ಲದೇ ಅಚ್ಚುಕಟ್ಟಾಗಿ ನಡೆಸಲು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ.

* ಕಳೆದ ಬಾರಿಯ ಅನುಭವದ ಆಧಾರದ ಮೇಲೆ ಉತ್ತಮ ರೀತಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆ ಕಲ್ಪಿಸಲಾಗುವುದು.

* ಸದನದ ಕಾರ್ಯಕಲಾಪಗಳನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲ ವಿಭಾಗದ ಅಧಿಕಾರಿಗಳ ಜತೆ ಚರ್ಚಿಸಿ, ನಿರ್ದೇಶನಗಳನ್ನು ನೀಡಲಾಗಿದೆ.

* ಬೆಳಗಾವಿಯಲ್ಲಿ ಹತ್ತನೇ ಅಧಿವೇಶನ ನಡೆಯುತ್ತಿದೆ. ಏಳು ಅಧಿವೇಶನ ಸುವರ್ಣಸೌಧದಲ್ಲಿ ನಡೆದಿದ್ದು, ಎರಡು ಹೊರಗಡೆ ನಡೆಸಲಾಗಿರುತ್ತದೆ.

* ಈ ಬಾರಿ ಮಹತ್ವದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದೆ.

* ಕೋವಿಡ್ ಇಲ್ಲದಿರುವುದರಿಂದ ಈ ಬಾರಿ ಯಾವುದೇ ರೀತಿಯ ನಿರ್ಬಂಧ ಇರುವುದಿಲ್ಲ. ಆದ್ದರಿಂದ ಪ್ರಶ್ನೋತ್ತರ ವೇಳೆ, ಶೂನ್ಯ ವೇಳೆ, ಮಸೂದೆ ಅಂಗೀಕಾರ ಸೇರಿದಂತೆ ಕಲಾಪದ ಎಲ್ಲ ಚಟುವಟಿಕೆಗಳು ಯಥಾ ಪ್ರಕಾರ ನಡೆಯಲಿವೆ.

* ಸಾರ್ವಜನಿಕರಿಗೆ ಕಲಾಪ ವೀಕ್ಷಿಸಲು ಮುಕ್ತ ಅವಕಾಶ ನೀಡಲಾಗುವುದು. ಪ್ರವೇಶದ್ವಾರದ ಬಳಿ ಅಗತ್ಯ ಗುರುತಿನ ಚೀಟಿಯನ್ನು ನೀಡಿ ಪ್ರವೇಶ ಕಲ್ಪಿಸಲಾಗುತ್ತದೆ.

* 6 ಮಸೂದೆಗಳನ್ನು ಈ ಅಧಿವೇಶನದಲ್ಲಿ ತರಲಾಗುತ್ತಿದೆ. ಇದರಲ್ಲಿ ಎರಡು ಮಸೂದೆಗಳನ್ನು ಈಗಾಗಲೇ ಮಂಡಿಸಲಾಗಿದ್ದು, ಚರ್ಚಿಸಿ ಅವುಗಳನ್ನು ಅಂಗೀಕರಿಸುವ ಪ್ರಕ್ರಿಯೆ ನಡೆಯಲಿದೆ.

ಇದಲ್ಲದೇ ನಾಲ್ಕು ಹೊಸ ವಿಧೇಯಕಗಳು ಬಂದಿರುತ್ತವೆ. ಬೇರೆ ಯಾವುದೇ ವಿಧೇಯಕ ಇದ್ದರೆ ಸರಕಾರ ಅವುಗಳನ್ನು ಮಂಡಿಸಲಿದೆ.

* ಮೊದಲ ದಿನ ವಿಧಾನ ಸಭೆ ಉಪಾಧ್ಯಕ್ಷ ಆನಂದ ಮಾಮನಿ ಸೇರಿದಂತೆ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು.

* ವಿಧಾನಸಭೆ ಅಧ್ಯಕ್ಷರಾದ ಬಳಿಕ ಅತ್ಯುತ್ತಮ ಶಾಸಕರನ್ನು ಆಯ್ಕೆಗೆ ತೀರ್ಮಾನಿಸಲಾಗಿದೆ. ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲಾಗುವುದು.

* ಆಯ್ಕೆ ಸಮಿತಿಯು ನೀಡುವ ವರದಿ ಆಧರಿಸಿ ಅತ್ಯುತ್ತಮ ಶಾಸಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.

* ಸಮಗ್ರ ಕರ್ನಾಟಕದ ಜತೆಗೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ವಿಷಯಗಳ ಚರ್ಚೆಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ಸೂಕ್ತ ದಿನಗಳನ್ನು ನಿಗದಿಪಡಿಸಲಾಗುವುದು.

* ಅಧಿವೇಶನ ಹೊರತುಪಡಿಸಿ ಉಳಿದ ಅವಧಿಯಲ್ಲಿ ಸುವರ್ಣ ವಿಧಾನಸೌಧ ಸದ್ಬಳಕೆ ಅಗಬೇಕು. ಇಡೀ ವರ್ಷ ಕಡ್ಡದಲ್ಲಿ ಲವಲವಿಕೆಯಿಂದ ಚಟುವಟಿಕೆಗಳು ನಡೆಯಬೇಕು ಎಂಬ ಅಭಿಪ್ರಾಯಗಳಿವೆ.

ಶಾಸಕರ ಭವನ ನಿರ್ಮಾಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸರಕಾರದ ಹಂತದಲ್ಲಿ ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.

* ಅಧಿವೇಶನದ ಕಲಾಪಗಳಲ್ಲಿ ಸಚಿವರು ಮತ್ತು ಶಾಸಕರು ಕಡ್ಡಾಯವಾಗಿ ಹಾಜರಾಗಬೇಕು. ಅನಿವಾರ್ಯ ಸಂದರ್ಭಗಳಲ್ಲಿ ತಮ್ಮ ಅನುಮತಿ ಮೇರೆಗೆ ಕಲಾಪಗಳ ಹಾಜರಾತಿಯಿಂದ ವಿನಾಯಿತಿ ಪಡೆಯಬಹುದು.

ಸದನದಲ್ಲಿ ನಾನು ಭಾಗವಹಿಸುವುದಿಲ್ಲ ಎಂಬ ಮಾತುಗಳನ್ನು ನಾನು ಒಪ್ಪುವುದಿಲ್ಲ. ಪ್ರಜಾಸಂಸದೀಯ ಪಾವಿತ್ರ್ಯತೆ ಕಾಪಾಡಲು ಎಲ್ಲ ಜನಪ್ರತಿನಿಧಿಗಳು ಸಹಕರಿಸಬೇಕು.

* ಜನರ ಆಶಯಗಳನ್ನು ಈಡೇರಿಸುವ ಸಂಸದೀಯ ಮಾರ್ಗ ಅಧಿವೇಶನದ ಉದ್ದೇಶವಾಗಿರುತ್ತದೆ. ಆದ್ದರಿಂದ ಜನರ ಭಾವನೆಗಳಿಗೆ ಸ್ಪಂದಿಸಿ ಎಲ್ಲರೂ ಸದನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿಕೊಂಡರು.


Join The Telegram Join The WhatsApp
Admin
the authorAdmin

Leave a Reply