Join The Telegram | Join The WhatsApp |
ಹಾವೇರಿ:
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಆತಿಥ್ಯ ಒದಗಿಸಲಿದೆ.
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿಗದಿಯಾಗಿದೆ.ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ ಅಧ್ಯಕ್ಷರು ಮುಂದಿನ ಸಾಹಿತ್ಯ ಸಮ್ಮೇಳನಕ್ಕೆ ಆತಿಥ್ಯ ವಹಿಸಲು ಆಸಕ್ತಿ ತೋರಿದರು.
ಕೊನೆಗೂ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿಣಿ ಸಭೆಯಲ್ಲಿ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಈ ಬಗ್ಗೆ ಮಾತನಾಡಿ, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸ್ಥಳದ ಬಗ್ಗೆ ಚರ್ಚೆ ನಡೆದು 46 ಮತದಾರರು ಮತ ಚಲಾವಣೆ ಮಾಡಿದ್ದಾರೆ. 17 ಮತಗಳು ಮಂಡ್ಯ ಜಿಲ್ಲೆಗೆ ಹಾಗೂ 16 ಮತಗಳು ಬಳ್ಳಾರಿ ಜಿಲ್ಲೆಗೆ ಬಂದಿವೆ ಎಂದು ತಿಳಿಸಿದ್ದಾರೆ.
Join The Telegram | Join The WhatsApp |