ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಗದಗ ಜಿಲ್ಲೆಗೆ ಕೊನೆಯ ಸ್ಥಾನ ಪಡೆದಿದೆ. ಕಲಾ ವಿಭಾಗದಲ್ಲಿ ಬೆಂಗಳೂರಿನ ಮೇಧಾ.ಡಿ. ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ವಿದ್ಯಾಲಕ್ಷ್ಮೀ ಮೊದಲ ಸ್ಥಾನ 598 ಅಂಕ ಗಳಿಸಿದ್ದು, ಇವಳು ಹುಬ್ಬಳ್ಳಿಯ ವಿದ್ಯಾನಿಕೇತನ ಕಾಲೇಜು ವಿದ್ಯಾರ್ಥಿನಿ. 5,52,690 ವಿದ್ಯಾರ್ಥಿಗಳು ಉತ್ತೀರ್ಣ..ಒಟ್ಟಾರೆ ಶೇ 81.15 ರಷ್ಟು ಪಾಸ್ ಆಗಿದ್ದಾರೆ.
ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಎಂದಿನಂತೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆ ಎರಡನೇ ಸ್ಥಾನ ಪಡೆದುಕೊಂಡಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಪರೀಕ್ಷೆ ಬರೆದವರಲ್ಲಿ ಒಟ್ಟಾರೆ ಶೇಕಡ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಹೊಸದಾಗಿ ಪರೀಕ್ಷೆ ಬರೆದವರು ಶೇ.84.59 ಫಲಿತಾಂಶ ದಾಖಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಎಂದಿನಂತೆ ಮೊದಲ ಸ್ಥಾನದಲ್ಲಿದ್ದು, ಶೇ.97.37 ಫಲಿತಾಂಶ ಪಡೆದುಕೊಂಡಿದೆ. ನಂತರದ ಸ್ಥಾನದಲ್ಲಿ ಉಡುಪಿ ಇದ್ದು, ಶೇ.96.80 ಫಲಿತಾಂಶ ಗಳಿಸಿದೆ. ಮೂರನೇ ಹಾಗೂ ನಾಲ್ಕನೇ ಸ್ಥಾನಗಳಲ್ಲಿ ವಿಜಯಪುರ (ಶೇ.94.89) ಹಾಗೂ ಉತ್ತರ ಕನ್ನಡ (ಶೇ.92.51) ಇವೆ. ಕೊನೆಯ ಸ್ಥಾನದಲ್ಲಿ ಗದಗ (ಶೇ.72.86) ಪಡೆದಿದೆ. ಬೆಂಗಳೂರು ಉತ್ತರ ಶೇ.88.67 ಹಾಗೂ ಬೆಂಗಳೂರು ದಕ್ಷಿಣ ಶೇ.89.57 ಫಲಿತಾಂಶ ದಾಖಲಿಸಿವೆ.
ಗಣಿತದಲ್ಲಿ 6960 ಮಂದಿ, ಜೀವಶಾಸ್ತ್ರದಲ್ಲಿ 5925 ಮಂದಿ, 2570 ಮಂದಿ ಕನ್ನಡದಲ್ಲಿ , 1499 ಮಂದಿ ಸಂಸ್ಕೃತದಲ್ಲಿ , ಅರ್ಥಶಾಸ್ತ್ರದಲ್ಲಿ 1403 ಮಂದಿ, ಗಣಕ ವಿಜ್ಞಾನದಲ್ಲಿ 2661 ಮಂದಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ.
ಅಧಿಕೃತ ವೆಬ್ ಸೈಟ್ https://karresults.nic.in ಇದರಲ್ಲಿ ಫಲಿತಾಂಶ ಲಭ್ಯವಿದೆ.
ರಾಜ್ಯಾದ್ಯಂತ 2024ರ ದ್ವಿತೀಯ ಪಿಯುಸಿಗೆ 6,98,627 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 3,30,644 ಬಾಲಕರು, 3,67,980 ಬಾಲಕಿಯರು ಪರೀಕ್ಷೆಯನ್ನು ಬರೆದಿದ್ದಾರೆ. ರಾಜ್ಯಾದ್ಯಂತ ಪಿಯುಸಿ ಪರೀಕ್ಷೆಯು 1,124 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. 2023-24ನೇ ಸಾಲಿನಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಕ್ರಮದಲ್ಲಿ 80+20 ಮಾದರಿಯಂತೆ (80 ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ) ಅಂಕಗಳನ್ನು ನೀಡಲಾಗಿರುತ್ತದೆ. ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಮೌಲ್ಯಮಾಪನ ಕಾರ್ಯ ಮುಗಿದ ಬಳಿಕ ಅಂಕಗಳನ್ನು ಕಂಪ್ಯೂಟರೀಕರಣಗೊಳಿಸಲಾಗಿದೆ