ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಇಲ್ಲಿ ಯಾರು ಗೆಲ್ಲಬಹುದು ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಪಿಮಾರ್ಕ್ ಸಮೀಕ್ಷೆ ಪ್ರಕಾರ 3 ಕ್ಷೇತ್ರಗಳ ಪೈಕಿ ಎನ್ಡಿಎ 2 ಹಾಗೂ ಕಾಂಗ್ರೆಸ್ 1 ಸ್ಥಾನ ಗೆಲ್ಲಲಿದೆ. ಈ ಮೂಲಕ ಚನ್ನಪಟ್ಟಣ ಹಾಗೂ ಶಿಗ್ಗಾವಿಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿ, ಸಂಡೂರಿನಲ್ಲಿ ಕೈ ಅಭ್ಯರ್ಥಿ ಜಯಭೇರಿ ಬಾರಿಸುವ ಸಾಧ್ಯತೆಗಳಿವೆ. ನವೆಂಬರ್ 23ರಂದು ಪ್ರಕಟವಾಗುವ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.