ಕೋಟ : ಇಲ್ಲಿನ ಕಾರಂತ ಥೀಂ ಪಾರ್ಕ್‌ನಲ್ಲಿ ಮೇ 4ರಂದು ನಡೆಯಲಿರುವ ಕುಂದಾಪ್ರ ಕನ್ನಡ 5ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಂಘಟಕ ಡಾ.ಅಣ್ಣಯ್ಯ ಕುಲಾಲ ಉಳ್ಳೂರು ಆಯ್ಕೆಯಾಗಿದ್ದಾರೆ.

ಶಿವರಾಮ ಕಾರಂತ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯಿತಿ, ಕೋಟದ ಉಸಿರು, ಬ್ರಹ್ಮಾವರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮಣೂರು ಗೀತಾನಂದ ಫೌಂಡೇಷನ್, ಕೋಟತಟ್ಟು ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಸಮ್ಮೇಳನಕ್ಕೆ ಸಹಕಾರ ನೀಡಲಿವೆ ಎಂದು ಕಾರ್ಯಾಧ್ಯಕ್ಷ ಆನಂದ ಸಿ. ಕುಂದ‌ರ್, ಅಧ್ಯಕ್ಷ ಸತೀಶ ಬಾರಿಕೆರೆ, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಪಿಡಿಒ ರವೀಂದ್ರ ರಾವ್, ಸಂಚಾಲಕಿ ಜ್ಯೋತಿ ಸಾಲಿಗ್ರಾಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.