ಬೆಳಗಾವಿ : ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಸಿಕ್ಕಿದರೆ ನನ್ನ ಪುತ್ರ ಅಮಿತ್ ಸ್ಪರ್ಧಿಸಬಹುದು ಎಂದು ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ಪ್ರಭಾಕರ ಕೋರೆ ಹೇಳಿದರು.

ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಲವು ಆಕಾಂಕ್ಷಿಗಳು ಪ್ರಯತ್ನ ನಡೆಸಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಸಿಕ್ಕಿದರೆ ಪುತ್ರ ಸ್ಪರ್ಧಿಸಬಹುದು. ಈ ಮೊದಲು ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದಿಂದ ಸ್ಪರ್ಧಿಸಲು ಅಮಿತ್ ಗೆ ಅವಕಾಶ ಸಿಕ್ಕಿತ್ತು. ಆದರೆ, ಆತ ಆಸಕ್ತಿ ತೋರಲಿಲ್ಲ. ಈಗ ಅವನ ಸ್ನೇಹಿತರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಈಗ ಟಿಕೆಟ್ ಸಿಕ್ಕರೆ ಸ್ಪರ್ಧಿಸುವ ಇಚ್ಛೆ ಹೊಂದಿದ್ದಾನೆ ಎಂದು ಅವರು ಹೇಳಿದರು.