ಮಹಿಳೆಯರು ಆರ್ಥಿಕವಾಗಿ ಸಶಕ್ತರಾಗಬೇಕು, ಜೀವನದಲ್ಲಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಡಾ. ಸೋನಾಲಿ ಸರ್ನೋಬತ್ ಕರೆ

ಬೆಳಗಾವಿ: ಮಹಿಳೆಯರು ಜೀವನದಲ್ಲಿ ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ಬಿಜೆಪಿ ನಾಯಕಿ ಹಾಗೂ ವೈದ್ಯೆ ಡಾ.ಸೋನಾಲಿ ಸರ್ನೋಬತ್ ಹೇಳಿದರು. ಖಾನಾಪುರ ಇನ್ನರ್ ವಿಲ್ ಕ್ಲಬ್ ನಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಮೇಕಪ್ ತರಬೇತಿ, ಕುಪ್ಪಸ ಹೊಲಿಗೆ ಮತ್ತು ಕೇಕ್ ತಯಾರಿಕೆ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು.

ಇಂತಹ ಕಾರ್ಯಗಾರದಿಂದ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ ಎಂದು ಹೇಳಿದರು.