ಬೆಳಗಾವಿ : ವ್ಯಾಪಕವಾಗಿ ಸುರಿಯುತ್ತಿರುವ ಮಳೆಯ ಕಾರಣ ಬೆಳಗಾವಿ ಗ್ರಾಮೀಣ ಮತಕ್ಷೇತ್ರ ಮತ್ತು ಖಾನಾಪುರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಆಗಸ್ಟ್ 6 ರಿಂದ 10 ರವರೆಗೆ ಹಾಗೂ ಕಿತ್ತೂರು ತಾಲ್ಲೂಕಿನ ಅಂಗನವಾಡಿಗಳಿಗೆ ಆಗಸ್ಟ್ 6 ರಿಂದ 8 ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.