Join The Telegram | Join The WhatsApp |
ಸುಬ್ರಹ್ಮಣ್ಯ :
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಆಚರಣೆ ನಡೆಯುತ್ತಿದ್ದು ಆ ಪ್ರಯುಕ್ತ ಭಕ್ತರು ಕ್ಷೇತ್ರದಲ್ಲಿ ಎಡೆಸ್ನಾನ ಸೇವೆ ನೆರವೇರಿಸಿದರು.
ಕೊರೊನಾ ಹಿನ್ನಲೆಯಲ್ಲಿ ಕಳೆದ ಎರಡು ವರ್ಷಗಳ ಬಳಿಕ ಎಡೆಸ್ನಾನ ಸೇವೆಗೆ ಅವಕಾಶ ನೀಡಲಾಗಿದೆ. ಒಟ್ಟು 116 ಮಂದಿ ಭಕ್ತರು ಎಡೆಸ್ನಾನ ಸೇವೆಯನ್ನು ಸ್ವಯಂ ಪ್ರೇರಿತವಾಗಿ ನೆರವೇರಿಸಿದರು.
ದೇವರ ನೈವೇದ್ಯವನ್ನು ದೇವಸ್ಥಾನದ ಹೊರಾಂಗಣದಲ್ಲಿ ಗೋವಿಗೆ ತಿನ್ನಿಸಲಾಗುತ್ತದೆ.ಗೋವು ತಿಂದು ಉಳಿಸಿದ ಎಲೆಗಳ ಮೇಲೆ ಭಕ್ತಾದಿಗಳು ಉರುಳು ಸೇವೆ ನೆರವೇರಿಸುತ್ತಾರೆ.
ಚರ್ಮವ್ಯಾಧಿ ಮತ್ತು ಇತರ ರೋಗಗಳಿದ್ದವರು ಈ ಸೇವೆ ನೆರವೇರಿಸಿದರೆ ರೋಗ ಉಪಶಮನವಾಗುತ್ತೆ ಅನ್ನೋ ನಂಬಿಕೆ ಭಕ್ತರಲ್ಲಿದೆ.
Join The Telegram | Join The WhatsApp |