ಬೆಂಗಳೂರು : ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ, ಮಾರ್ಗಸೂಚಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. 2024ರ ಅಕ್ಟೋಬರ್ 3ರಿಂದ 20ರವರೆಗೆ ದಸರಾ ರಜೆ ಮತ್ತು 2025ರ ಏಪ್ರಿಲ್11ರಿಂದ ಮೇ.28ರವರೆಗೆ ಬೇಸಿಗೆ ರಜೆ ಆರಂಭಗೊಳ್ಳಲಿದೆ ಎಂದು ಆದೇಶದಲ್ಲಿ ಇಲಾಖೆ ಮಾಹಿತಿ ನೀಡಿದೆ. ಈ ಬಾರಿ ಮೌಲ್ಯಾಂಕನ ಕಾರ್ಯಕ್ಕೆ 26 ದಿನವಾಗಿದ್ದು, 224 ದಿನ ಶಾಲಾ ಕರ್ತವ್ಯದ ದಿನಗಳಾಗಿವೆ.