ಬೆಂಗಳೂರು: ಲೋಕಸಭಾ ಚುನಾವಣೆಗೆ ಶೀಘ್ರದಲ್ಲಿಯೇ ದಿನಾಂಕ ಘೋಷಣೆಯಾಗುವ ಹಿನ್ನೆಲೆಯಲ್ಲಿ ಅನಧಿಕೃತ ಗೋಡೆ ಬರಹ, ಬಿತ್ತಿಪತ್ರ, ಬ್ಯಾನರ್ಗಳನ್ನು ತೆರವುಗೊಳಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ನಿರ್ದೇಶನ ನೀಡಿದೆ. ಚುನಾವಣೆ ಘೋಷಣೆಯಾದ ತಕ್ಷಣದಿಂದ ನೀತಿ ಸಂಹಿತೆ ಜಾರಿಯಾಗಲಿದೆ. ಈ ವೇಳೆ ಸರ್ಕಾರಿ, ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಇರುವ ಅನಧಿಕೃತ ಗೋಡೆ, ಬಿತ್ತಿ ಪತ್ರ, ಬ್ಯಾನರ್ಗಳನ್ನು ತೆರವುಗೊಳಿಸಬೇಕು. ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳು ಮಾಹಿತಿ ಪಡೆಯಲು ತಮ್ಮ ಹಂತದ ತಂಡಗಳನ್ನು ರಚಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ತಿಳಿಸಿದೆ.