ದೆಹಲಿ : ಭಾರತದ ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಮಧ್ಯಾಹ್ನ 3 ಗಂಟೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಇಂದು ಪ್ರಕಟಿಸಬಹುದು ಎಂದು ನಿರೀಕ್ಷಿಸಲಾಗಿದೆ.
ರಾಜ್ಯಗಳ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲು ಪತ್ರಿಕಾಗೋಷ್ಠಿ ನಡೆಸುವುದಾಗಿ ಚುನಾವಣಾ ಸಂಸ್ಥೆ ತಿಳಿಸಿದೆ. ಹರ್ಯಾಣ,ಮಹಾರಾಷ್ಟ್ರ ಮತ್ತು ಜಾರ್ಖಂಡ್ನಲ್ಲಿ ಮುಂದಿನ 5 ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಯ ಅವಧಿಯು ನವೆಂಬರ್ 3 ಮತ್ತು ನವೆಂಬರ್ 26 ರಂದು ಮತ್ತು ಜಾರ್ಖಂಡ್ನ ಮುಂದಿನ ವರ್ಷ ಜನವರಿಯಲ್ಲಿ ಕೊನೆಗೊಳ್ಳಲಿದೆ.
ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಳನ್ನು ನಡೆಸಲು ಸೆಪ್ಟೆಂಬರ್ 30ರ ಗಡುವನ್ನು ನಿಗದಿಪಡಿಸಲಾಗಿದೆ. 2018 ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾಯಿತ ಸರ್ಕಾರವಿಲ್ಲ. ಈ ಹಿಂದೆ, ಚುನಾವಣಾ ಆಯೋಗವು ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ವಿಧಾನಸಭಾ ಚುನಾವಣೆಗಳನ್ನು ಒಟ್ಟಿಗೆ ನಡೆಸಿದರೆ, ಜಾರ್ಖಂಡ್ನ ಚುನಾವಣೆಗಳನ್ನು ಪ್ರತ್ಯೇಕವಾಗಿ ನಡೆಸಲಾಯಿತು.