ಮುಂಬೈ: ಮಹಾರಾಷ್ಟ್ರದಲ್ಲಿ ಇಂದು ನೂತನ ಮುಖ್ಯಮಂತ್ರಿಯ ಆಯ್ಕೆ ಬಹುತೇಕ ನಡೆಯಲಿದೆ. ಗುರುವಾರದಂದು ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಪ್ರಮಾಣವಚನ ನೆರವೇರಲಿದೆ.’ಮಹಾಯುತಿ ಕೂಟದಿಂದ ಹೊಸ ಸರ್ಕಾರ ರಚನೆಗೆ ಕಸರತ್ತು ಮುಂದುವರಿದಿದ್ದು, ಮಹತ್ವದ ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ವೇಳೆ ನಾಯಕನ ಆಯ್ಕೆ ನಡೆಯಲಿದ್ದು, ಬಳಿಕ ಸಿಎಂ ಯಾರೆಂಬ ಘೋಷಣೆಯನ್ನು ಬಿಜೆಪಿ ಮಾಡಲಿದೆ.
ಮೂಲಗಳ ಪ್ರಕಾರ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮತ್ತೆ ಸಿಎಂ ಆಗುವ ಸಾಧ್ಯತೆ ಹೆಚ್ಚಿದೆ. ಕುತೂಹಲದ ವಿಷಯವೆಂದರೆ, ನಿರ್ಗಮಿತ ಸಿಎಂ, ಶಿವಸೇನೆ ನಾಯಕ ಏಕನಾಥ ಶಿಂಧೆ ಅವರು ಡಿಸಿಎಂ ಆಗಲು ಒಪ್ಪಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇವರ ಜತೆಗೆ ಎನ್‌ಸಿಪಿಯ ಅಜಿತ್ ಪವಾರ್ ಕೂಡ ಡಿಸಿಎಂ ಪಟ್ಟ ಅಲಂಕರಿಸುವ ಸಂಭವವಿದೆ.
ಶಾಸಕಾಂಗ ನಾಯಕನ ಆಯ್ಕೆ ಆಗುತ್ತಿದ್ದಂತೆಯೇ ಬಿಜೆಪಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದೆ ಎಂದು ಮೂಲಗಳು ಹೇಳಿವೆ.ಶಿಂಧೆ-ಫಡ್ನವೀಸ್ ಭೇಟಿ: ಅನಾರೋಗ್ಯಕ್ಕೆ ತುತ್ತಾಗಿ
ಸ್ವಂತ ಊರು ಥಾಣೆಗೆ ಮರಳಿದ್ದ ಶಿಂಧೆ ಮಂಗಳವಾರ ಮುಂಬೈಗೆ ಮರಳಿದ್ದಾರೆ. ಅವರ ‘ವರ್ಷಾ’ ನಿವಾಸಕ್ಕೆ ಬಂದ ಫಡ್ನವೀಸ್ ಅವರು ಶಿಂಧೆ ಜತೆ ಕೆಲ ಹೊತ್ತು ಮಾತುಕತೆ ನಡೆಸಿದರು. ಇದಕ್ಕೂ ಮುನ್ನ ಶಿಂಧೆ ಅವರು ಥಾಣೆ ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.ಪ್ರಮಾಣ ವಚನಕ್ಕೆ ಸಿದ್ಧತೆ: ಡಿ.5 ಕ್ಕೆ ಹೊಸ ಸರ್ಕಾರದ
ಪ್ರಮಾಣ ವಚನೆ ಸಮಾರಂಭ ನಡೆಯಲಿದ್ದು, ಮುಂಬೈನ ಅಜಾದ್ ಮೈದಾನದಲ್ಲಿ ಈಗಾಗಲೇ ಭರ್ಜರಿ ಸಿದ್ಧತೆ ಆರಂಭವಾಗಿದೆ.ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಂಕುಲೆ ದಕ್ಷಿಣ ಮುಂಬೈನಲ್ಲಿ ಅಜಾದ್ ಮೈದಾನಕ್ಕೆ ಆಗಮಿಸಿ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಆಡಳಿತವಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ಇನ್ಮುಂದೆ ಮಹಾರಾಷ್ಟ್ರದಲ್ಲಿ ಆಡಳಿತ ನಡೆಸಲಿದೆ.