ಮೂಡುಬಿದಿರೆ : ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬರುತ್ತಿರುವ ಆಳ್ವಾಸ್ ಶಿಕ್ಷಣ ಈ ಬಾರಿ ಪದವಿ ಪೂರ್ವ ಪ್ರವೇಶಿಸುವ ವಿದ್ಯಾರ್ಥಿಗಳಿಗಾಗಿಯೇ ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನವನ್ನು ಘೋಷಿಸಿದೆ.
10 ನೇ ತರಗತಿಯಲ್ಲಿ ಸಿಬಿಎಸ್‌ಇ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ), ಐಸಿಎಸ್‌ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ) ದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ.
ಗಣಿತ, ವಿಜ್ಞಾನ ಮತ್ತು ಸಾಮಾನ್ಯ ಜ್ಞಾನ ವಿಷಯಗಳ ಕುರಿತು 120 ನಿಮಿಷಗಳ ಪರೀಕ್ಷೆಯು ಅ15,2024 ರಂದು ಮೂಡುಬಿದಿರೆಯ ವಿದ್ಯಾಗಿರಿ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಶ್ನೆಪತ್ರಿಕೆ ಇರಲಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅ.12 ಕೊನೆಯ ದಿನಾಂಕ ವಾಗಿರುತ್ತದೆ. ವಿದ್ಯಾರ್ಥಿಗಳು ಈ ವೆಬ್
https://scholarship.alvas.org/puc/login.
php ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸಮಾಲೋಚನೆ ನಡೆಸಲಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ:636633727/6366377827/ 6366377825 ಸಂಪರ್ಕಿಸಬಹುದು.