ಬೆಳಗಾವಿ :
ಹೊಸ ವಂಟಮೂರಿ ಗ್ರಾಮದಲ್ಲಿ ಪರಿಶಿಷ್ಠ ಪಂಗಡದ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿ ನಂತರ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಘಟನೆ ಅತ್ಯಂತ ಖಂಡನೀಯ. ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶ ನಡೆಯುತ್ತಿರುವ ಸಂದರ್ಭದಲ್ಲಿಯೇ ಇಂತಹ ಘಟನೆ ನಡೆದಿರುವುದು ರಾಜ್ಯದ ಕಾನೂನು ಸುವ್ಯವಸ್ಥೆಗೆ ಹಿಡಿದಿರುವ ಕನ್ನಡಿಯಾಗಿದೆ. ದಲಿತ ಮಹಿಳೆಯ ಮೇಲೆ ನಡೆದ ಈ ಹೇಯ ಕೃತ್ಯವನ್ನು ಖಂಡಿಸಿ ಆ ಕುಟುಂಬಕ್ಕೆ ನ್ಯಾಯ ಒದಗಿಸಲು ಕೊರಿ ಸಂಸತ್ತಿನ ಗಾಂಧಿ ಪ್ರತಿಮೆಯ ಬಳಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ರಾಜ್ಯದ ಬಿಜೆಪಿ ಸಂಸದರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನೆ ನಡೆಸಿದರು.

ಸಂಸದರಾದ ನಳಿನಕುಮಾರ ಕಟೀಲ್‌, ಸದಾನಂದಗೌಡ, ಪಿ.ಸಿ ಮೋಹನ. ಕೆ. ನಾರಾಯಣ, ರಮೇಶ ಜಿಗಜಿಣಗಿ, ಜಿ.ಎಂ. ಸಿದ್ದೇಶ್ವರ್, ವೈ.ದೇವೇಂದ್ರಪ್ಪ ಜಿ.ಎಸ್.ಬಸವರಾಜ ಸೇರಿದಂತೆ ಅನೇಕ ಸಂಸದರು ಉಪಸ್ಥಿತರಿದ್ದರು.