ಬೆಳಗಾವಿ :
ನವದೆಹಲಿಯಲ್ಲಿ ಕೇಂದ್ರ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೌರವ್ ದ್ವಿವೇದಿ ಅವರನ್ನು ಮಂಗಳವಾರ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ, ಬೆಳಗಾವಿಯಲ್ಲಿ ಎಫ್.ಎಂ ರೇಡಿಯೋ ಕೇಂದ್ರ ಮತ್ತು ಚಾನೆಲ್ ಸ್ಥಾಪನೆಗೆ ಮನವಿ ಮಾಡಿದರು.
ಗೌರವ್ ದ್ವಿವೇದಿ ಅವರು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಪ್ರಸ್ತಾವನೆ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಬೆಳಗಾವಿ ಕೋರ್ ಡೆವಲಪ್ಮೆಂಟ್ ಗ್ರೂಪ್ ಸದಸ್ಯರಾದ ಶೈಲೇಶ್ ಯಲಮಳ್ಳಿ, ಅಶ್ವಿನ್ ಪಾಟೀಲ್, ಸಂದೀಪ ಪಾಟೀಲ್ ಉಪಸ್ಥಿತರಿದ್ದರು.