ಉಡುಪಿ : ESI ಆಸ್ಪತ್ರೆ ನಿರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ. ಉಡುಪಿಯ ವಾರಂಬಳ್ಳಿಯಲ್ಲಿ ಸುಮಾರು 5 ಎಕರೆ ಜಾಗವನ್ನು ಮೀಸಲಿರಿಸಿದ್ದು ಇಂದು ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಸ್ಥಳ ಪರಿಶೀಲನೆ ನಡೆಸಿದ್ದೇನೆ. ಆದಷ್ಟು ಬೇಗ ಕಾಮಗಾರಿಗೆ ಶಂಕು ಸ್ಥಾಪನೆಯನ್ನು ನೆರವೇರಿಸಿ ಇಎಸ್ಐ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಇಂದು ನಮ್ಮ ಜೊತೆಗೆ ವಿಭಾಗೀಯ ESI ಅಧಿಕಾರಿ, ಇಎಸ್ಐ ಕಾರ್ಪೋರೇಷನ್ ಮ್ಯಾನೇಜರ್, ತಹಶಿಲ್ದಾರರು ಹಾಗೂ ವಾರಂಬಲ್ಲಿ ಪಂಚಾಯತ್ ಅಧ್ಯಕ್ಷ ನಿತ್ಯಾನಂದ ಮತ್ತು ಸದಸ್ಯರು ಉಪಸ್ಥಿತರಿದ್ದರು ಎಂದು ಅವರು ಹೇಳಿದರು.