ದೆಹಲಿ :
ಉಡುಪಿಯಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣವಾಗಲಿದೆ.
ವೈದ್ಯಕೀಯ ಆರೈಕೆಯ ಮೂಲ ಸೌಕರ್ಯದ ಬಲವರ್ಧನೆಗೂ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯ ಶನಿವಾರ ತಿಳಿಸಿದೆ.
ಕರ್ನಾಟಕದ ಉಡುಪಿ ಮತ್ತು ಕೇರಳದ ಇಡುಕ್ಕಿಯಲ್ಲಿ ತಲಾ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ನಿರ್ಮಿಸಲು ನಿರ್ಧರಿಸಿದೆ. ಪಂಜಾಬ್‌ನ ಮಲೇರ್ಕೋಟ್ಲಾದಲ್ಲಿ 150 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸಲಿದೆ. ಈ ಆಸ್ಪತ್ರೆಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನಕ್ಕೂ ಅನುಮೋದನೆ ನೀಡಿದೆ ಎಂದು ವಿವರಿಸಿದೆ.