ಬೆಂಗಳೂರು: ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಳಾ ತಿಳಿಸಿದ್ದಾರೆ. ಮೌಲ್ಯಮಾ ಪನ ಕಾರ್ಯವು ಏ.15ರಿಂದ ಆರಂಭವಾಗಲಿದ್ದು, ಸುಮಾರು 20 ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆದಷ್ಟು ಬೇಗ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಲಾಗುವುದು. ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ನಿರೀಕ್ಷಿಸಬಹುದು ಎಂದರು.