Join The Telegram | Join The WhatsApp |
ಬಾಗಲಕೋಟೆ-
ರಾಜ್ಯ ಸರ್ಕಾರದಿಂದ ನೂತನ ಬಾಗಲಕೋಟೆ ವಿಶ್ವವಿದ್ಯಾಲಯವನ್ನು ( Bagalkot University ) ಸ್ಥಾಪಿಸಿ ಆದೇಶಿಸಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು ವಿವಿ ಸ್ಥಾಪನೆ ಆದಂತೆ ಆಗಿದೆ.
ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ( Department of Higher Education ) ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಕಾಲೇಜುಗ ಮೇಲ್ವಿಚಾರಣೆಯನ್ನು ಸುಧಾರಿಸಲು ರಾಜ್ಯದ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿ ವಿನೂತನ ಮಾದರಿಯ 7 ವಿವಿಗಳನ್ನು ಚಾಮರಾಜನಗರ, ಬೀದರ್, ಹಾವೇರಿ, ಕೊಡಗು, ಹಾಸನ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಸ್ಥಾಪಿಸಲಾಗುದು ಎಂಬುದಾಗಿ 2022-23ನೇ ಸಾಲಿನ ಅಯವ್ಯಯ ಘೋಷಣೆಯಲ್ಲಿ ಘೋಷಿಸಲಾಗಿತ್ತು ಎಂದಿದ್ದಾರೆ.
ಇದರಂತೆ ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳಿಗಿಂತ ಭಿನ್ನವಾಗಿ ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ ಹೆಚ್ಚುವರಿ ಮಾನವ ಸಂಪನ್ಮೂಲ ಉಪಯೋಗಿಸದೇ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ಬೇರ್ಪಟ್ಟ ನೂತನ ಬಾಗಲಕೋಟೆ ವಿವಿಯ ಕೇಂದ್ರ ಸ್ಥಾನವನ್ನು ಜಮಖಂಡಿ, ಬಾಗಲಕೋಟೆ ಜಿಲ್ಲೆಯಲ್ಲಿ ಸ್ಥಾಪಿಸಲು ಆದೇಶಿಸಿದ್ದಾರೆ
Join The Telegram | Join The WhatsApp |