Join The Telegram | Join The WhatsApp |
ಬೆಂಗಳೂರು-
ರಾಜ್ಯ ಸರ್ಕಾರಿ ನೌಕರರು ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ (CLT Exam) ಉತ್ತೀರ್ಣರಾಗಿರಲೇಬೇಕೆಂದು ಸರ್ಕಾರ ನಿಗದಿಪಡಿಸಿದ್ದ ಗಡುವನ್ನು ಮತ್ತೆ ವಿಸ್ತರಿಸಲಾಗಿದೆ.
ಕಳೆದ ಮೇ 5ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಸರ್ಕಾರಿ ನೌಕರರು ದಿನಾಂಕ 31-12-2022ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಒಂದು ವೇಳೆ ಉತ್ತೀರ್ಣರಾಗದೇ ಇದ್ದಲ್ಲಿ ಮುಂಬಡ್ತಿ ಮತ್ತು ವಾರ್ಷಿಕ ವೇತನ ಬಡ್ತಿಗಳಿಸಲು ಅನರ್ಹರಾಗುತ್ತಾರೆ ಎಂದು ತಿಳಿಸಲಾಗಿತ್ತು. ಈ ಸಂಬಂಧ ಜ.13 ರಂದು ಅಧಿಸೂಚನೆ ಹೊರಡಿಸಿರುವ ಸರ್ಕಾರ ಮಾರ್ಚ್ 31, 2023ರ ವರೆಗೆ ಗಡುವನ್ನು ಮತ್ತೆ ವಿಸ್ತರಿಸಿದೆ.
ಈ ನಡುವೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈ ಪರೀಕ್ಷೆಯ ಅವಧಿಯನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಬೇಕೆಂದು ಮನವಿ ಸಲ್ಲಿಸಿದೆ. ನಮ್ಮ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ಶೀಘ್ರದಲ್ಲಿಯೇ ಅಧಿಕೃತ ಸರ್ಕಾರಿ ಆದೇಶ ಹೊರ ಬೀಳಲಿದೆ ಎಂದು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.
Join The Telegram | Join The WhatsApp |