ದೆಹಲಿ : ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಯ ದಿನ ಘೋಷಣೆ ಯಾವಾಗ ಆಗಬಹುದು ಎಂಬ ಕಾತರ ಎಲ್ಲರಲ್ಲಿದೆ. 2019 ರಲ್ಲಿ ಮಾರ್ಚ್ 10 ರಂದು ಲೋಕಸಭೆಯ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಯಾವಾಗ ಚುನಾವಣೆ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಎಲ್ಲರೂ ಕಾಯುತ್ತಿದ್ದಾರೆ.
ಹದಿನೆಂಟನೇ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ ಮಾ.14 ಇಲ್ಲವೇ 15ರಂದು ಚುನಾವಣಾ ಆಯೋಗವು ಸುದ್ದಿಗೋಷ್ಠಿಯಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂಬುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಅಲ್ಲದೆ ಈ ಬಾರಿಯೂ ಸಹ ಕಳೆದ ಬಾರಿಯಂತೆ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧತೆ ಕೈಗೊಂಡಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಈಗಾಗಲೇ ಹಲವು ರಾಜ್ಯಗಳಿಗೆ ಪ್ರವಾಸ ಕೈಗೊಂಡು ಸಿದ್ಧತೆ ಪರಿಶೀಲಿಸಿದೆ.