ತುಮಕೂರು: ನಗರದ ಸಿದ್ದಗಂಗಾ ಮಠದಲ್ಲಿ ಫೆ.26ರಿಂದ ಸಿದ್ದಗಂಗಾ ಜಾತ್ರೆ ನಡೆಯಲಿದೆ.
ಮಾರ್ಚ್ 11ರವರೆಗೆ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಸಿದ್ದಗಂಗಾ ವಸ್ತು ಪ್ರದರ್ಶನ ಟ್ರಸ್ಟ್ನ ಕಾರ್ಯದರ್ಶಿ ಗಂಗಾಧರಯ್ಯ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಫೆ.26 ರಂದು ಸಂಜೆ 7ಗಂಟೆಗೆ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಗುತ್ತದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೃಷಿ ಇಲಾಖೆ, ಅರಣ್ಯ, ಪಶುಸಂಗೋಪನಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ 20 ಮಳಿಗೆ, 150 ಖಾಸಗಿ ವಾಣಿಜ್ಯ ಮಳಿಗೆ ಸೇರಿದಂತೆ ಒಟ್ಟು 170 ಮಳಿಗೆ ತೆರೆ ಯಲಾಗಿದೆ. ಸ್ಥಳೀಯ ಕಲಾವಿದರು ಸೇರಿದಂತೆ ರಾಜ್ಯದ ಹೆಸರಾಂತ ನಾಟಕ ಕಂಪನಿಗಳಿಂದ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ. ಮಾರ್ಚ್ 8ರಂದು ಮಹಾಶಿವರಾತ್ರಿಯ ಪ್ರಯುಕ್ತ ಮಠದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಬೆಳ್ಳಿ ರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಜರುಗಲಿದೆ. ಮಾರ್ಚ್ 9 ರಂದು ಸಿದ್ದಲಿಂಗೇಶ್ವರ ಸ್ವಾಮಿ ರಥೋತ್ಸವ ನಡೆಯಲಿದೆ. ಮಾರ್ಚ್ 11 ರಂದು ತೆಪ್ಪೋತ್ಸವದೊಂದಿಗೆ ಜಾತ್ರೆ, ವಸ್ತು ಪ್ರದರ್ಶನ ನಡೆಯಲಿದೆ ಎಂದರು.