ಬೆಂಗಳೂರು: ಖ್ಯಾತ ಬಾಲಿವುಡ್ ಗಾಯಕಿ ಅನುರಾಧಾ ಪೌಡ್ವಾಲ್ ಶನಿವಾರ (ಮಾರ್ಚ್ 16) ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರ್ಪಡೆಗೊಂಡಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಮುಖಂಡರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೌಡ್ವಾಲ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದರು. ʻʻಮೋದಿ ನೇತೃತ್ವದಲ್ಲಿ ಪಕ್ಷಕ್ಕೆ ಸೇರಲು ನನಗೆ ಸಂತೋಷವಾಗಿದೆ’’ ಎಂದರು.
ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಮುಖ್ಯ ವಕ್ತಾರ ಅನಿಲ್ ಬಲುನಿ ಸೇರಿದಂತೆ ಹಿರಿಯ ನಾಯಕರ ಸಮ್ಮುಖದಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಗಾಯಕಿ ಅನುರಾಧಾ ಪೌಡ್ವಾಲ್ ಬಿಜೆಪಿಗೆ ಸೇರ್ಪಡೆಯಾದರು.
ಅಯೋಧ್ಯೆಯ ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ರಾಮ ಭಜನೆಯ ಕಾರ್ಯಕ್ರಮವನ್ನು ಅನುರಾಧಾ ಪೌಡ್ವಾಲ್ ನೀಡಿದ್ದರು.