ಅಮಾಸೆಬೈಲು : ಪದೋನ್ನತಿ ಹೊಂದಿದ ದೈಹಿಕ ಶಿಕ್ಷಣ ಶಿಕ್ಷಕರಿಗೆ ಬೀಳ್ಕೊಡುಗೆ, ಉಚಿತ ನೋಟ್ಸ್ ಪುಸ್ತಕ ಮತ್ತು ಸಮವಸ್ತ್ರ ವಿತರಣಾ ಸಮಾರಂಭ ಅಮಾಸೆಬೈಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.18 ವರ್ಷಗಳ ಕಾಲ ಅಮಾಸೆಬೈಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ, ವೃತ್ತಿಯಲ್ಲಿ ಪದೋನ್ನತಿ ಹೊಂದಿ ಹಾಲಾಡಿ ಪ್ರೌಢಶಾಲೆಗೆ ವರ್ಗಾವಣೆಗೊಂಡ ರತ್ನಾಕರ್ ಹೆಚ್. ರವರನ್ನು ಶಾಲಾ ಎಸ್. ಡಿ. ಎಮ್. ಸಿ.,ಶಾಲಾ ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕ ವೃಂದದವರು ಸನ್ಮಾನಿಸಿ ಬೀಳ್ಕೊಟ್ಟರು.

 

ಗೀತಾ ಹೆಚ್ ಎಸ್ ಎನ್ ಫೌಂಡೇಶನ್ (ರಿ) ಕೋಟೇಶ್ವರ ಟ್ರಸ್ಟಿನ ವತಿಯಿಂದ ಅಮಾಸೆಬೈಲು ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತವಾಗಿ ಎರಡು ಜೊತೆ ಸಮವಸ್ತ್ರ ಮತ್ತು ನೋಟ್ಸ್ ಪುಸ್ತಕಗಳ ಕೊಡುಗೆ ಹಸ್ತಾಂತರ ಕಾರ್ಯಕ್ರಮ ನೆರವೇರಿತು.ಅಮಾಸೆಬೈಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೀತಾ ಹೆಚ್ ಎಸ್ ಎನ್ ಫೌಂಡೇಶನ್ ನ ಅಧ್ಯಕ್ಷ ಶಂಕರ್ ಐತಾಳ್, ಟ್ರಸ್ಟಿಗಳಾದ ಶ್ರೀರಾಮ ಅಡಿಗ, ಹಾಲಾಡಿ ವೃತ್ತದ ಶಿಕ್ಷಣ ಸಂಯೋಜಕ ಶೇಖರ್ ಯು. ಅಮಾಸೆಬೈಲು ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಭಾಕರ ಶೆಟ್ಟಿ, ನಿವೃತ್ತ ಮುಖ್ಯಶಿಕ್ಷಕ ಶ್ರೀಧರ್ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಶಾಲಾ ಎಸ್. ಡಿ. ಎಮ್. ಸಿ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಟ್ಟಾಡಿ ನವೀನ್ ಚಂದ್ರ ಶೆಟ್ಟಿ , ಮುಖ್ಯ ಶಿಕ್ಷಕ ಶಶಿಧರ್ ಶೆಟ್ಟಿ ಉಪಸ್ಥಿತರಿದ್ದರು.ಶಾಲೆಯ ಮುಖ್ಯ ಶಿಕ್ಷಕ ಶಶಿಧರ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸವಿನಾ ಹೆಗ್ಡೆ ಸನ್ಮಾನಿತರನ್ನು ಪರಿಚಯಿಸಿದರು. ಹಿರಿಯ ಶಿಕ್ಷಕಿ ಸವಿತಾ ಅನಿಸಿಕೆ ಹಂಚಿಕೊಂಡರು. ಅರ್ಪಿತ ಕಾರ್ಯಕ್ರಮ ನಿರೂಪಿಸಿದರು. ಗೀತಾ ಹೆಗ್ಗಡೆ ವಂದಿಸಿದರು.