ಬೆಳಗಾವಿ :
ಸುವರ್ಣವಿಧಾನಸೌಧದಲ್ಲಿ ರೈತ ಸಮುದಾಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂದವಾದ ನೇಗಿಲನ್ನು ಉಡುಗೊರೆಯಾಗಿ ನೀಡಿ ಶುಭ ಹಾರೈಸಿತು.

 

ಬಳ್ಳಾರಿ ನಾಲಾ ಯೋಜನೆಗಳು ಶೀಘ್ರದಲ್ಲಿ ಅನುಷ್ಠಾನ ಮಾಡಿ ಪೂರ್ಣಗೊಳಿಸುವಂತೆ ಮನವಿ ಮಾಡಿದರು.

ತಾಲೂಕು ಕೇಂದ್ರ ಯರಗಟ್ಟಿಗೆ ಎಲ್ಲಾ ಸರ್ಕಾರಿ ಕಚೇರಿಗಳಾದ ಪೊಲೀಸ್ ಠಾಣೆ, ಸಬ್ ರಿಜಿಸ್ಟ್ರಾ‌ರ್ ಆಫೀಸ್, ತಾಲೂಕು ಪಂಚಾಯತಿ, ಯರಗಟ್ಟಿ ಸಮುದಾಯ ಆರೋಗ್ಯ ಕೇಂದ್ರವನ್ನು ಸಾರ್ವಜನಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವಂತೆ ಬೇಡಿಕೆ ಇಟ್ಟರು. ಸುವರ್ಣಸೌಧದಲ್ಲೇ ಸಿಎಂಗೆ ತಮ್ಮ ಬೇಡಿಕೆ ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು. ತಾವು ತಂದಿದ್ದ ನೇಗಿಲನ್ನು ಸಿಎಂಗೆ ಗಿಫ್ಟ್ ನೀಡಿದರು. ಸಿಎಂ ಸಿದ್ದರಾಮಯ್ಯ ನೇಗಿಲನ್ನು ತಮ್ಮ ಹೆಗಲ ಮೇಲೇರಿಸಿಕೊಳ್ಳುವ ಮೂಲಕ ಗಮನ ಸೆಳೆದರು.