ಬೆಳಗಾವಿ :
2023-24ನೇ ಶೈಕ್ಷಣಿಕ ಸಾಲಿನಲ್ಲಿ ನಡೆಯುವ ಸ್ನಾತಕೋತ್ತರ ಅಧ್ಯಯನ ವಿಭಾಗಗಳ ಪ್ರವೇಶಾತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ Freeship Card ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ವಿಭಾಗಗಳ ಶುಲ್ಕಗಳ ಅನುಸಾರವಾಗಿ ನಿಯಮಾನುಸಾರ ಪ್ರವೇಶಾತಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತಿದೆ.
ಕಾರಣ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು Freeship Card ನ್ನು ಪ್ರವೇಶಾತಿ ಪಡೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಹಾಜರುಪಡಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು.
ಪ್ರವೇಶಾತಿ ಪ್ರಕ್ರಿಯೆಯ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣ www.rcub.ac.in ದಲ್ಲಿ ಈಗಾಗಲೇ ಪ್ರಕಟಿಸಲಾಗಿದೆ ಹಾಗೂ ಕಾಲಕಾಲಕ್ಕೆ ಹಂತಗಳ ಅನುಸಾರವಾಗಿ ವಿವರಗಳನ್ನು ಪ್ರಕಟಿಸಲಾಗುವುದು ಎಂದು ಸಹಾಯಕ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.