Join The Telegram | Join The WhatsApp |
ವಿಜಯಪುರ :
ವಿಜಯಪುರ ಶ್ರೀ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಜನಸಾಗರ ಹರಿದುಬಂದಿದೆ. ಸೋಮವಾರ ರಾತ್ರಿಯಿಂದ ಮಂಗಳವಾರದವರೆಗೂ 12 ಲಕ್ಷಕ್ಕೂ ಹೆಚ್ಚು ಮಂದಿ ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ದರ್ಶನಕ್ಕೆ ಬಂದ ಎಲ್ಲರಿಗೂ ಪ್ರಸಾದ ವಿತರಣೆ ಮಾಡಲಾಗಿದೆ. ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರ ಇಡಲಾದ ಸೈನಿಕ ಶಾಲೆಯ ಆವರಣದಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಅಂತ್ಯಕ್ರಿಯೆ ವೇಳೆಗೆ ಕೇವಲ ಒಂದು ಸಾವಿರ ಮಂದಿಗೆ ಅವಕಾಶ ನೀಡಲಾಗಿದೆ . 12 ಲಕ್ಷಕ್ಕೂ ಹೆಚ್ಚು ದರ್ಶನ ಭಾಗ್ಯ ಪಡೆದರು.
Join The Telegram | Join The WhatsApp |