ಬೆಂಗಳೂರು : ಕೆಎಸ್‌ಆರ್‌ಟಿಸಿ ಸೇರಿದಂತೆ 4 ರಸ್ತೆ ಸಾರಿಗೆ ನಿಗಮಗಳ ಬಸ್‌ ಟಿಕೆಟ್ ದರ ಪರಿಷ್ಕರಣೆ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, 15% ರಷ್ಟು ಟಿಕೆಟ್ ದರ ಏರಿಕೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. 2014 ನಂತರ 2020ರಲ್ಲಿ ದರ ಏರಿಕೆ ಮಾಡಲಾಗಿತ್ತು. ಇದೀಗ ಸರ್ಕಾರ ಬಸ್ ಪ್ರಯಾಣ ದರವನ್ನು 15% ಏರಿಕೆ ಮಾಡಿ, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಮಾಡಿದೆ.